ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ಯಾಲಿಫೋರ್ನಿಯಾದ ಬಿಎಪಿಎಸ್ ಹಿಂದು ದೇವಾಲಯದ ಮೇಲಿನ ದಾಳಿಯನ್ನು ಭಾರತ ಖಂಡಿಸಿದೆ. ಅಧಿಕಾರಿಗಳು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಈ ಬಗ್ಗೆ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್, ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್ ನಲ್ಲಿರುವ ಹಿಂದು ದೇವಾಲಯದಲ್ಲಿ ನಡೆದ ದಾಳಿ ನೀಚ ವಿದ್ವಾಂಸಕ. ಇಂಥ ಹೇಯ ಕೃತ್ಯಗಳನ್ನು ನಾವು ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸುತ್ತೇವೆ. ಕೃತ್ಯಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಪೂಜಾ ಸ್ಥಳಗಳಿಗೆ ಸಾಕಷ್ಟು ಭದ್ರತೆ ಒದಗಿಸಲು ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.
ಲಾಸ್ ಎಂಜಲೀಸ್ ನಲ್ಲಿ ಖಲಿಸ್ತಾನಿ ಜನಾಭಿಪ್ರಾಯ ಸಂಗ್ರಹ ಎನ್ನುವ ಕಾರ್ಯಕ್ರಮ ಆರಂಭಕ್ಕೂ ಕೆಲ ದಿನಗಳ ಮೊದಲು ಈ ಘಟನೆ ನಡೆದಿದೆ.