ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ನಿನ್ನೆಗೆ ಹೋಲಿಸಿದರೆ ಎರಡು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಕೇಂದ್ರ ವೈದ್ಯಕೀಯ ಆರೋಗ್ಯ ಇಲಾಖೆಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 12,249 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕೋವಿಡ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 81,687ಕ್ಕೆ ತಲುಪಿದೆ. ಇದರೊಂದಿಗೆ ದೇಶದಲ್ಲಿ ಶೇ.0.19ರಷ್ಟು ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಇದುವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 4,33,31,645 ಕ್ಕೆ ತಲುಪಿದೆ.
ದೇಶದಲ್ಲಿ ಕೋವಿಡ್‌ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 5,24,903 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 9,862 ಜನರು ಕರೋನಾ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾರೆ, ಇದುವರೆಗೆ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 4,27,25,055 ಕ್ಕೆ ತಲುಪಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.98.60 ರಷ್ಟಿದೆ.