ಭಾರತ ಯಾರನ್ನೂ ಕೆಣುಕುವುದಿಲ್ಲ, ನಮ್ಮನ್ನು ಕೆಣಕಿದರೆ ತಕ್ಕ ಉತ್ತರ: ರಾಜನಾಥ್ ಸಿಂಗ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಇಂದು ಇಡೀ ಜಗ್ಗತ್ತು ಭಾರತ ಏನು ಹೇಳಲಿದೆ ಎಂಬುದನ್ನು ಕಿವಿಗೊಟ್ಟು ಕೇಳುತ್ತಿದೆ. ಭಯೋತ್ಪಾದನೆಗೆ ಆಶ್ರಯ ನೀಡುತ್ತಿರುವ ದೇಶಗಳೂ ಭಾರತವನ್ನು ಕೆಣುಕುವುದಕ್ಕೆ ಹೆದರುತ್ತಿವೆ, ನಾವು ಯಾರನ್ನೂ ಕೆಣುಕುವುದಿಲ್ಲ, ಆದರೇ ನಮ್ಮನ್ನು ಕೆಣಿಕಿದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶತ್ರುರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಜಿಲ್ಲೆಯ ರ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಇದರ 30ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, 2025ರೊಳಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವನ್ನಾಗಿ ಮಾಡುವ ಆಶಯವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊತ್ತುಕೊಂಡಿದ್ದಾರೆ. ಮುಂದಿನ 5 ವರ್ಷಗಳಲ್ಲಿ ದೇಶವು ಜಗತ್ತಿನ 3 ಶ್ರೀಮಂತ ಆರ್ಥಿಕ ದೇಶಗಳಲ್ಲೊಂದಾಗಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!