ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ನಾಳೆ ನಡೆಯುವ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆಂಬ ವರದಿ ಪ್ರಕಟಗೊಂಡಿದೆ.
ಆಂಗ್ಲರ ವಿರುದ್ಧದ ಮೂರನೇ ಟಿ-20 ಪಂದ್ಯದ ವೇಳೆ ಗ್ರೋಯಿನ್ ಇಂಜುರಿಗೆ ತುತ್ತಾಗಿರುವ ಕಾರಣ ಅವರು ತಂಡದಿಂದ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಭಾರತ-ಇಂಗ್ಲೆಂಡ್ ನಡುವೆ ಲಂಡನ್ನ ದಿ ಓವಲ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯ ನಾಳೆ ನಡೆಯಲಿದೆ. ಈ ಪಂದ್ಯಕ್ಕೆ ಅವರು ಅಲಭ್ಯರಾಗಲಿದ್ದು, ಮುಂದಿನ ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ವಿರಾಟ್ ಕೊಹ್ಲಿ ಗಾಯದ ಸ್ವರೂಪದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ನಾಳೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವಕಾಶ ತಪ್ಪಿಸಿಕೊಂಡರೆ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿ ಬ್ಯಾಟ್ ಬೀಸುವ ಸಾಧ್ಯತೆ ದಟ್ಟವಾಗಿದೆ. ಉಳಿದಂತೆ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ ಇರಲಿದ್ದಾರೆ.