ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ತಂಡದಿಂದ ಹೊರಬಿದ್ದ ಇನ್ನೊಬ್ಬ ಆಟಗಾರ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅಗಸ್ಟ್ 4ರಿಂದ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ನಡೆಯಲಿದ್ದು, ಇದಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಮೂವರು ಆಟಗಾರರು ಪ್ರವಾಸದಿಂದ ಹೊರಗುಳಿದಿದ್ದಾರೆ. ಶುಬ್ಮನ್ ಗಿಲ್ ಮತ್ತು ಅವೇಶ್ ಖಾನ್ ಗಾಯಗೊಂಡಿದ್ದು, ಅವರ ನಂತ್ರ ವಾಷಿಂಗ್ಟನ್ ಸುಂದರ್ ಕೂಡ ಗಾಯಗೊಂಡಿದ್ದಾರೆ.
ವಾಷಿಂಗ್ಟನ್ ಸುಂದರ್ ಗಾಯದ ಕಾರಣ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ವಾಷಿಂಗ್ಟನ್ ಸುಂದರ್ ಮತ್ತು ಅವೇಶ್ ಖಾನ್ ಇಬ್ಬರೂ ಅಭ್ಯಾಸ ಪಂದ್ಯವನ್ನು ಆಡುತ್ತಿದ್ದರು.
ವಾಷಿಂಗ್ಟನ್ ಸುಂದರ್ ಬೆರಳಿಗೆ ಪೆಟ್ಟಾಗಿದೆ. ಆದರೂ ಅವರು ಯಾವಾಗ ಗಾಯಗೊಂಡರು ಎಂಬ ಮಾಹಿತಿಯಿಲ್ಲ. ಕೌಂಟಿ ಸೆಲೆಕ್ಟ್ ಇಲೆವೆನ್ ಪರ ಆಡುವಾಗ ವಾಷಿಂಗ್ಟನ್ ಸುಂದರ್ ಕೇವಲ 1 ರನ್ ಗಳಿಸಿದ್ದರು. ವಾಷಿಂಗ್ಟನ್ ಸುಂದರ್ ಇಂಗ್ಲೆಂಡ್ ಪ್ರವಾಸದಿಂದ ನಿರ್ಗಮಿಸುವುದು ಭಾರತಕ್ಕೆ ದೊಡ್ಡ ಹೊಡೆತ ಎನ್ನಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss