ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಟೆಸ್ಟ್ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ.
5 ಪಂದ್ಯಗಳ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ.
ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್ಆರ್ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್ಕೋಟ್)
ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)
ಇಂಗ್ಲೆಂಡ್ ತಂಡದ ಘೋಷಣೆ:
ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡವನ್ನು (England) ಆಯ್ಕೆ ಮಾಡಲಾಗಿದೆ. 16 ಸದಸ್ಯರ ಈ ಬಳಗವನ್ನು ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮುನ್ನಡೆಸಲಿದ್ದಾರೆ.