ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಇತ್ತ ಜಸ್‌ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಆಗಮಿಸಿದ್ದು . ಕರುಣ್ ನಾಯರ್‌ಗೆ ಮತ್ತೊಂದು ಅವಕಾಶ ಸಿಕ್ಕಿದೆ. ಇಂಗ್ಲೆಂಡ್ ಪರ ಪದೇ ಪದೇ ಗಾಯಗೊಳ್ಳುತ್ತಿದ್ದ ಆರ್ಚರ್ 2021ರ ಬಳಿಕ ಇದೇ ಮೊದಲ ಬಾರಿ ಟೆಸ್ಟ್ ಆಡಲು ಸಜ್ಜಾಗಿದ್ದಾರೆ.
ಭಾರತ ತಂಡ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಈವರೆಗೂ 19 ಟೆಸ್ಟ್ ಪಂದ್ಯಗಳನ್ನಾಡಿದ್ದು, 3ರಲ್ಲಿ ಜಯಗಳಿಸಿದೆ. 12 ಪಂದ್ಯಗಳಲ್ಲಿ ಇಂಗ್ಲೆಂಡ್ ಗೆದ್ದಿದ್ದರೆ, ಉಳಿದ 4 ಪಂದ್ಯಗಳು ಡ್ರಾಗೊಂಡಿವೆ. ಆದರೆ ಇಲ್ಲಿ ಕೊನೆ 3 ಮುಖಾಮುಖಿಯಲ್ಲಿ ಭಾರತ 2ರಲ್ಲಿ ಜಯಗಳಿಸಿದೆ.
ಉಭಯ ಆಡುವ ಬಳಗ
ಇಂಗ್ಲೆಂಡ್: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಫ್ರಾ ಆರ್ಚರ್ ಮತ್ತು ಶೋಯೆಬ್ ಬಶೀರ್.
ಭಾರತ: ಯಶಸ್ವಿ ಜೈಸ್ವಾಲ್, ಕೆ.ಎಲ್ ರಾಹುಲ್, ಕರುಣ್ ನಾಯರ್ , ಶುಭಮನ್ ಗಿಲ್(ನಾಯಕ), ರಿಷಭ್ ಪಂತ್, ರವೀಂದ್ರ ಜಡೇಜಾ, ನಿತೀಶ್ ರೆಡಿ, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್‌ದೀಪ್.