ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಂಪಿಯನ್ಸ್ ಫೈನಲ್‌ಗೆ ಟೀಂ ಇಂಡಿಯಾ ಪ್ರವೇಶಿಸಿದ್ದು ವಿರಾಟ್ ಕೊಹ್ಲಿ ಸಚಿನ್ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ಬ್ರೇಕ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 74ನೇ ಅರ್ಧಶತಕ ಸಿಡಿಸಿದರೆ ಐಸಿಸಿ ಆಯೋಜಿಸಿದ ಟೂರ್ನಿಯಲ್ಲಿ 24ನೇ ಅರ್ಧಶತಕ ಹೊಡೆದಿದ್ದಾರೆ. ಈ ಮೂಲಕ ಐಸಿಸಿ ಆಯೋಜಿಸಿದ್ದ ಟೂರ್ನಿಯಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇಲ್ಲಿಯವರೆಗೆ ಐಸಿಸಿ ಟೂರ್ನಿಯಲ್ಲಿ ಅತಿ ಹೆಚ್ಚು ಅರ್ಧ ಶತಕ ಸಿಡಿಸಿದ ಖ್ಯಾತಿ ಸಚಿನ್ ತೆಂಡೂಲ್ಕರ್ ಹೆಸರಲ್ಲಿತ್ತು. ಆದರೆ ಈ ದಾಖಲೆಯನ್ನು ಕೊಹ್ಲಿ ಬ್ರೇಕ್ ಮಾಡಿದ್ದಾರೆ. ಅತ್ಯುತ್ತಮ ಆಟವಾಡಿದ್ದ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿದೆ.