ಹೊಸದಿಗಂತ ಡಿಜಿಟಲ್ ಡೆಸ್ಕ್ :
ಭೀಕರ ಭೂಕಂಪದಿಂದ ನಲುಗಿದ ಮ್ಯಾನ್ಮಾರ್‌ಗೆ ಭಾರತ ಸಹಾಯ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್‌ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ನೈರ್ಮಲ್ಯ ಕಿಟ್, ಸೋಲಾರ್ ಲೈಟ್, ಜನರೇಟರ್ ಸೆಟ್ ಹಾಗೂ ಔಷಧಗಳ ನೆರವನ್ನು ಭಾರತ ನೀಡಿದೆ. ಈಗಾಗಲೇ ಸುಮಾರು 15 ಟನ್ ಪರಿಹಾರ ಸಾಮಗ್ರಿಗಳನ್ನು ಭಾರತೀಯ ವಾಯುಸೇನೆಯ C-130-J ವಿಮಾನ ವಿಮಾನದಲ್ಲಿ ಮ್ಯಾನ್ಮಾರ್‌ಗೆ ಕಳುಹಿಸಲಾಗುತ್ತಿದೆ.
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಪ್ರಬಲ ಭೂಕಂಪನದ ಬೆನ್ನಲೆ ಪ್ರಧಾನಿ ನರೇಂದ್ರ ಮೋದಿ ಸಹಾಯ ಹಸ್ತ ಚಾಚುವ ಭರವಸೆ ನೀಡಿದ್ದರು. ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದರು.
ಥಾಯ್ಲೆಂಡ್ ಮತ್ತು ಮಯನ್ಮಾರ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಥಾಯ್ಲೆಂಡ್ ರಾಜಧಾನಿ ಬ್ಯಾಕಾಂಕ್ ಅನ್ನು ನಲುಗಿಸಿದೆ. ಬ್ಯಾಕಾಂಕ್‌ನಲ್ಲಿ ಸಂಭವಿಸಿದ ಭೂಕಂಪನವು ರಿಕ್ಟರ್ ಮಾಪಕದಲ್ಲಿ 7.3 ರಿಂದ 7.7 ರವರೆಗೆ ತೀವ್ರತೆಯಲ್ಲಿ ದಾಖಲಾಗಿದೆ. ಥಾಯ್ಲೆಂಡ್‌ನ ಖನಿಜ ಸಂಪನ್ಮೂಲ ಇಲಾಖೆಯ ಪ್ರಕಾರ, ಈ ಭೂಕಂಪವು 1930ರ ನಂತರ ಥಾಯ್ಲೆಂಡ್‌ನಲ್ಲಿ ಅನುಭವಿಸಿದ ಅತ್ಯಂತ ಶಕ್ತಿಶಾಲಿ ಕಂಪನವಾಗಿದೆ ಎಂದು ತಿಳಿಸಿದೆ.