ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸರ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ (23) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಅಪಹಾಸ್ಯವನ್ನು ಖಂಡಿಸಿ ಭಾರತ ತೀವ್ರ ತನಿಖೆಗೆ ಒತ್ತಾಯಿಸಿತ್ತು. ಇದೀಗ ತ್ವರಿತವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಮೆರಿಕ ಸರ್ಕಾರ ಹೇಳಿದೆ.
ಸೌತ್ ಲೇಕ್ ಯೂನಿಯನ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನ ವಿದ್ಯಾರ್ಥಿನಿಯಾಗಿದ್ದ ಆಂಧ್ರಪ್ರದೇಶ ಮೂಲದ ಜಾಹ್ನವ ಕಳೆದ ಜನವರಿ 23ರಂದು ಪೊಲೀಸರ ಕಾರು ಡಿಕ್ಕಿಯಾದ ಪರಿಣಾಮ ಮೃತಪಟ್ಟಿದ್ದರು. ಅಂದು ಘಟನಾ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಅಪಹಾಸ್ಯ ಮಾಡಿದ್ದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದರ ಕುರಿತಾಗಿ ಸಂಪೂರ್ಣ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಭಾರತ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಇದೀಗ ಜೋ ಬೈಡನ್ ಸರ್ಕಾರವು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.