ಹೊಸ ಪ್ರಗತಿಯತ್ತ ಭಾರತ- ಫ್ರಾನ್ಸ್ ಸಂಬಂಧ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಿ20 ಶೃಂಗಸಭೆಯ (G20 Summit) ಮುಕ್ತಾಯದ ಬಳಿಕ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರೋನ್ ಭೇಟಿಯಾಗಿ ಮಾತನಾಡಿದರು.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ‘ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರೋನ್ ಜೊತೆ ಬಹಳ ಫಲಪ್ರದವಾದ ಭೋಜನಸಭೆ ನಡೆಯಿತು. ನಾವು ಹಲವು ವಿಚಾರಗಳನ್ನು ಚರ್ಚಿಸಿದೆವು. ಭಾರತ ಮತ್ತು ಫ್ರಾನ್ಸ್ ಸಂಬಂಧವನ್ನು ಹೊಸ ಪ್ರಗತಿಯ ಎತ್ತರಕ್ಕೆ ಕೊಂಡೊಯ್ಯಲು ಎದುರು ನೋಡುತ್ತಿದ್ದೇವೆ’ ಎಂದು ಮೋದಿ ಹೇಳಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರೋನ್ ಕೂಡ ತಮ್ಮ ಹಾಗೂ ಮೋದಿ ಭೇಟಿಯ ಕ್ಷಣಗಳನ್ನು ಪೋಸ್ಟ್ ಮಾಡಿದ್ದಾರೆ. ವಸುದೈವ ಕುಟುಂಬಕಂ ಎಂದು ತಮ್ಮ ಒಂದು ಎಕ್ಸ್ ಪೋಸ್ಟ್​ನಲ್ಲಿ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!