ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತಕ್ಕೆ ಮೊದಲ ಬಾರಿಗೆ 2003ರಲ್ಲಿ ಭೇಟಿ ನೀಡಿದಾಗಿನಿಂದ ಇಂದಿನವರೆಗೆ ದೇಶದಲ್ಲಿ ಆಗಿರುವ ಬದಲಾವಣೆಗಳನ್ನು ಹತ್ತಿರದಿಂದ ಗಮನಿಸಿದ್ದೇನೆ ಎಂದು ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳನ್ನು ಪೂರ್ಣಗೊಳಿಸಿರುವ ಸಂದರ್ಭದಲ್ಲಿ, ಭಾರತದ ಅಭಿವೃದ್ಧಿ, ಕ್ರೀಡಾ ಕ್ಷೇತ್ರದ ಪ್ರಗತಿ, ತಂತ್ರಜ್ಞಾನದ ಬೆಳವಣಿಗೆ ಮತ್ತು ಜಾಗತಿಕ ಪ್ರಭಾವದ ಕುರಿತು ಅವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.
2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಮೋದಿ, 2014ರಲ್ಲಿ ಪ್ರಧಾನಿಯಾದರು. ದೀರ್ಘಕಾಲ ಸಾರ್ವಜನಿಕ ಆಡಳಿತದಲ್ಲಿ ಮುಂದುವರಿದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗಮನಾರ್ಹ ಸಂಗತಿ ಎಂದು ಲೇಖನದಲ್ಲಿ ಉಲ್ಲೇಖಿಸಿದ್ದಾರೆ.
ಭಾರತೀಯ ಕ್ರೀಡೆಯಲ್ಲಿ ಹೊಸ ಆತ್ಮವಿಶ್ವಾಸ
ಭಾರತೀಯ ಕ್ರಿಕೆಟ್ನಲ್ಲಿ ಪ್ರತಿಭಾವಂತ ಆಟಗಾರರ ಸಂಖ್ಯೆ ಹೆಚ್ಚಿರುವುದರ ಜೊತೆಗೆ, ತಂಡದ ಬೆಂಚ್ ಬಲ, ಫಿಟ್ನೆಸ್, ತರಬೇತಿ ಮತ್ತು ವೃತ್ತಿಪರತೆಯಲ್ಲೂ ಬದಲಾವಣೆ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ. ಮಹಿಳಾ ಕ್ರಿಕೆಟ್ನ ಬೆಳವಣಿಗೆಯು ಭಾರತಕ್ಕೆ ಮಾತ್ರವಲ್ಲ, ಜಾಗತಿಕ ಕ್ರೀಡಾ ಕ್ಷೇತ್ರಕ್ಕೂ ಪ್ರೇರಣೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕ್ರಿಕೆಟ್ ಹೊರತಾಗಿಯೂ ಅಥ್ಲೆಟಿಕ್ಸ್, ಶೂಟಿಂಗ್, ಕುಸ್ತಿ, ಬಾಕ್ಸಿಂಗ್, ಬ್ಯಾಡ್ಮಿಂಟನ್ ಮತ್ತು ಹಾಕಿಯಂತಹ ಕ್ರೀಡೆಗಳಲ್ಲಿ ಭಾರತೀಯ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದನ್ನು ಅವರು ಗಮನಿಸಿದ್ದಾರೆ. ಉತ್ತಮ ಸೌಲಭ್ಯಗಳು ಮತ್ತು ತರಬೇತಿ ವ್ಯವಸ್ಥೆಗಳು ಈ ಬೆಳವಣಿಗೆಗೆ ನೆರವಾಗಿವೆ ಎಂಬುದು ಅವರ ಅಭಿಪ್ರಾಯ.
ಇದನ್ನೂ ಓದಿ:
ತಂತ್ರಜ್ಞಾನ ಮತ್ತು ಮೂಲಸೌಕರ್ಯದಲ್ಲಿ ಬದಲಾವಣೆ
ಭಾರತದ ವಿಮಾನ ನಿಲ್ದಾಣಗಳು, ರಸ್ತೆಗಳು, ಮೆಟ್ರೋ ವ್ಯವಸ್ಥೆ ಹಾಗೂ ಡಿಜಿಟಲ್ ಪಾವತಿ ಸೇವೆಗಳಲ್ಲಿ ಆಗಿರುವ ಬದಲಾವಣೆಗಳನ್ನು ಲೇಖನದಲ್ಲಿ ಪ್ರಸ್ತಾಪಿಸಲಾಗಿದೆ. ಸ್ಟಾರ್ಟ್ಅಪ್ಗಳ ಬೆಳವಣಿಗೆ, ಬಾಹ್ಯಾಕಾಶ ಸಾಧನೆಗಳು ಮತ್ತು ತಂತ್ರಜ್ಞಾನದ ಬಳಕೆಯೂ ದೇಶದ ಬದಲಾಗುತ್ತಿರುವ ಚಿತ್ರಣಕ್ಕೆ ಉದಾಹರಣೆಗಳಾಗಿವೆ.
ಪರಂಪರೆ, ಪರಿಸರಕ್ಕೂ ಒತ್ತು
ಯೋಗ, ವನ್ಯಜೀವಿ ಸಂರಕ್ಷಣೆಯದಂತಹ ಉಪಕ್ರಮಗಳನ್ನೂ ಅವರು ಉಲ್ಲೇಖಿಸಿದ್ದಾರೆ. ಆರ್ಥಿಕ ಪ್ರಗತಿಯ ಜೊತೆಗೆ ನೈಸರ್ಗಿಕ ಸಂಪತ್ತಿನ ರಕ್ಷಣೆಯೂ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.



