ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಆಮದುಗಳ ಮೇಲೆ ಭಾರಿ ಸುಂಕ ವಿಧಿಸುತ್ತಿದ್ದ ಭಾರತವು, ಸುಂಕಗಳನ್ನು ಗಣನೀಯವಾಗಿ ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಭಾರತ ನಮ್ಮ ಮೇಲೆ ಭಾರಿ ಸುಂಕ ವಿಧಿಸುತ್ತಿದೆ. ಭಾರತದಲ್ಲಿ ಏನನ್ನೂ ಮಾರಾಟ ಮಾಡಲು ಸಾಧ್ಯವಿಲ್ಲ. ಈಗ ಅವರು ಸುಂಕ ಕಡಿತಕ್ಕೆ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ನಿಜಕ್ಕೂ ಅನ್ಯಾಯವಾಗಿದೆ. ಪ್ರಸುತ್ತ ಸುಂಕುಗಳು ತಾತ್ಕಾಲಿಕ ಮತ್ತು ಸಣ್ಣ ಪ್ರಮಾಣದ್ದು. ಏಪ್ರಿಲ್ 2 ರಿಂದ ದೊಡ್ಡ ಬದಲಾವಣೆ ಬರಲಿದೆ ಎಂದು ಟ್ರಂಪ್ ತಿಳಿಸಿದ್ದಾರೆ.