Thursday, August 11, 2022

Latest Posts

ನಿನ್ನೆ ದೇಶದಲ್ಲಿ ಏರಿಕೆ ಕಂಡ ಕೊರೋನಾ ಪ್ರಕರಣಗಳು: ಸಕ್ರಿಯ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ನಿನ್ನೆ 16,752 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 113 ಮಂದಿ ಬಲಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ, ಕಳೆದ 24 ಗಂಟೆಗಳಲ್ಲಿ 16,752 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 1,10, 96,731ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 1,64,511 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ದೇಶದಲ್ಲಿ 11,718 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,07,75,169ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 113 ಮಂದಿ ಬಲಿಯಾಗಿದ್ದು, ಕೊರೋನಾಗೆ ಒಟ್ಟು ಮೃತಪಟ್ಟವರ ಸಂಖ್ಯೆ 1,57,051ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss