ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕುರಿತು ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಪೋಸ್ಟ್ ಮಾಡಿದ್ದಾರೆ, “ಡಾ. ಮನಮೋಹನ್ ಸಿಂಗ್ ಅವರ ವ್ಯಕ್ತಿತ್ವದಲ್ಲಿ ಭಾರತವು ಒಬ್ಬ ಮಹಾನ್ ವ್ಯಕ್ತಿಯನ್ನು ಮತ್ತು ಫ್ರಾನ್ಸ್ ನಿಜವಾದ ಸ್ನೇಹಿತನನ್ನು ಕಳೆದುಕೊಂಡಿದೆ. ಅವರು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ನಮ್ಮ ಆಲೋಚನೆಗಳು ಅವರ ಕುಟುಂಬ ಮತ್ತು ಭಾರತದ ಜನರೊಂದಿಗೆ ಇವೆ.” ಎಂದು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.