April 13, 2026
Monday, April 13, 2026
spot_img

ಈ ಯುದ್ಧ ನಿಲ್ಲಿಸುವ ತಾಕತ್ತು ಭಾರತಕ್ಕಿದೆ, ಶೀಘ್ರವೇ ಮಧ್ಯಸ್ಥಿಕೆ ವಹಿಸಿ ಎಂದ ಫಿನ್‌ಲ್ಯಾಂಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇರಾನ್‌ -ಇಸ್ರೇಲ್‌ ಹಾಗೂ ಅಮೆರಿಕ ನಡುವಣ ಯುದ್ಧದಿಂದ ಇಡೀ ವಿಶ್ವವೇ ಸಮಸ್ಯೆ ಎದುರಿಸುತ್ತಿದೆ. ಈ ಯುದ್ಧ ನಿಲ್ಲಿಸಲು ಭಾರತ ಮಧ್ಯಸ್ಥಿಕೆ ವಹಿಸಲಿ ಎಂದು ಫಿನ್‌ಲ್ಯಾಂಡ್‌ ಅಧ್ಯಕ್ಷ ಅಲೆಕ್ಸಾಂಡರ್‌ ಸ್ಟಬ್‌ ಹೇಳಿದ್ದಾರೆ.

ಅಮೆರಿಕ ಮತ್ತು ಇರಾನ್ ಮಧ್ಯೆ ಶಾಂತಿ ಏರ್ಪಡಿಸಿ, ಬಿಕ್ಕಟ್ಟು ಶಮನಗೊಳಿಸಲು ಭಾರತ ಮಧ್ಯಪ್ರವೇಶ ಮಾಡಬೇಕು. ನಮಗೆ ಈಗ ಯುದ್ಧವಿರಾಮ ಬೇಕಿದೆ. ಇದರಲ್ಲಿ ಭಾರತ ಭಾಗಿಯಾಗಬಹುದಾ ಎನ್ನುವ ಕುತೂಹಲ ಇದೆ. ಬಿಕ್ಕಟ್ಟು ಶಮನಗೊಳಿಸಲು ಯುದ್ಧವಿರಾಮ ಏರ್ಪಡುವಂತೆ ಜೈಶಂಕರ್ ಕರೆ ಕೊಟ್ಟಿರುವುದನ್ನು ನಾವು ನೋಡಿದ್ದೇವೆ ಎಂದು ಅಲೆಕ್ಸಾಂಡರ್ ಸ್ಟಬ್ ಹೇಳಿದ್ದಾರೆ.

ಭಾರತ ಹೆಚ್ಚಿನ ದೇಶಗಳೊಂದಿಗೆ ಉತ್ತಮ ಸಂಬಂಧ ಇರಿಸಿಕೊಂಡಿದೆ. ಅಮೆರಿಕ, ಇರಾನ್ ಮತ್ತು ಇಸ್ರೇಲ್, ಈ ಮೂರೂ ದೇಶಗಳೊಂದಿಗೆ ಭಾರತಕ್ಕೆ ಉತ್ತಮ ಸಂಬಂಧ ಇದೆ. ಯಾರೊಂದಿಗೆ ಬೇಕಾದರೂ ಮಾತುಕತೆ ನಡೆಸುವ ಸ್ಥಿತಿಯಲ್ಲಿ ಭಾರತ ಇದೆ. ಇರಾನ್ ಜೊತೆ ಎಸ್ ಜೈಶಂಕರ್ ಮತ್ತು ನರೇಂದ್ರ ಮೋದಿ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !