ಮೋದಿ ನಾಯಕತ್ವದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಂಡ ಭಾರತ: ಭೂತಾನ್ ಪ್ರಧಾನಿ ತೊಬ್ಗೇ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ 10 ವರ್ಷಗಳಲ್ಲಿ ಭಾರತವು ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಅದ್ಭುತವಾಗಿ ಮುಂದುವರಿದಿದೆ ಎಂದು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಶ್ಲಾಘಿಸಿದ್ದಾರೆ.

ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ವಿದೇಶಾಂಗ ನೀತಿಯನ್ನು ಪ್ರಧಾನಿ ಮೋದಿಯವರ ನಾಯಕತ್ವದ ದೊಡ್ಡ ಸಾಧನೆಗಳಲ್ಲಿ ಒಂದು. ಅದೇ ರೀತಿ ಮೂಲಸೌಕರ್ಯಗಳಾದ ವಿಮಾನ ನಿಲ್ದಾಣಗಳು, ರಸ್ತೆಗಳು, ರೈಲುಗಳು ಮತ್ತು ಸಮುದ್ರಮಾರ್ಗಗಳಲ್ಲಿ ಅಭೂತಪೂರ್ವ ಅಭಿವೃದ್ಧಿಯನ್ನು ಕಂಡಿದೆ ಎಂದು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಹೇಳಿದರು.

ನರೇಂದ್ರ ಮೋದಿ ಅವರು ಐತಿಹಾಸಿಕ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಬಹುನಿರೀಕ್ಷಿತ ಸಮಾರಂಭದಲ್ಲಿ ಭಾಗವಹಿಸಲು ಸಜ್ಜಾಗಿರುವ ಗಣ್ಯ ಅತಿಥಿಗಳಲ್ಲಿ ಪಿಎಂ ತೊಬ್ಗೇ ಕೂಡ ಸೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!