ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಸರ್ಕಾರವು ಬಾಂಗ್ಲಾದೇಶದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧವನ್ನು ವಿಧಿಸಿದೆ. ಭಾರತ-ಬಾಂಗ್ಲಾದೇಶ ಗಡಿಯಾದ್ಯಂತ ಎಲ್ಲಾ ಭೂಮಾರ್ಗಗಳ ಮೂಲಕ ಆಮದು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಅಧಿಕೃತ ಮೂಲಗಳ ಪ್ರಕಾರ, ಬಾಂಗ್ಲಾದೇಶದಿಂದ ಆಮದಾಗುವ ಎಲ್ಲಾ ಸರಕುಗಳು ಕೇವಲ ಮಹಾರಾಷ್ಟ್ರದ ಜವಾಹರಲಾಲ್ ನೆಹರು ಬಂದರು ಮೂಲಕವೇ ಭಾರತಕ್ಕೆ ಪ್ರವೇಶಿಸಲು ಅನುಮತಿ ಇರಲಿದೆ ಎಂದು ತಿಳಿಸಿವೆ.
ಈ ಕ್ರಮವು ಗಡಿ ವ್ಯಾಪಾರದಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ. ಜೊತೆಗೆ ಜವಾಹರಲಾಲ್ ನೆಹರು ಬಂದರಿನಲ್ಲಿ ಕಟ್ಟುನಿಟ್ಟಾದ ತಪಾಸಣೆ ಮತ್ತು ಕಸ್ಟಮ್ಸ್ ಪ್ರಕ್ರಿಯೆಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿದುಬಂದಿದೆ.