ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಕೊನೆಯ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.
ಸರಣಿಯಲ್ಲಿ ಟೀಮ್ ಇಂಡಿಯಾ 3-1 ಅಂತರದ ಮುನ್ನಡೆ ಸಾಧಿಸಿರುವುರಿಂದ ಈ ಪಂದ್ಯವು ಕೇವಲ ಔಪಚಾರಿಕವಾಗಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕೊನೆಗೊಳಿಸಲು ಭಾರತೀಯ ಆಟಗಾರರು ಕಣ್ಣಿಟ್ಟಿದ್ದಾರೆ. ಮತ್ತೊಂದೆಡೆ, ಇಂಗ್ಲೆಂಡ್ ತಂಡವು ಸೋಲಿನ ಅಂತರವನ್ನು ಕಡಿಮೆ ಮಾಡಲು ಬಯಸುತ್ತಿದೆ.