ಇಂಡಿಯಾ-ಭಾರತ ವಿವಾದ: ಈ ಬಗ್ಗೆ ಹೇಳಿಕೆ ನೀಡದಂತೆ ಸಚಿವರಿಗೆ ಸೂಚನೆ ನೀಡಿದ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಕೆಲವು ದಿನಗಳಿಂದ ದೇಶಕ್ಕೆ ಭಾರತ್ ಎಂದು ಮರುನಾಮಕರಣ ಮಾಡುವ ವಿಚಾರವಾಗಿ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

ಈ ಬಗ್ಗೆ ಯಾವುದೇ ಹೇಳಿಕೆ ನೀಡುವಂತಿಲ್ಲ ಎಂದು ಸಚಿವರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಈ ವಿಷಯವಾಗಿ ಪ್ರಧಾನಿ ಮೋದಿ ಸಚಿವರ ಜತೆ ಚರ್ಚೆ ನಡೆಸಿದ್ದು, ಯಾವುದೇ ಹೇಳಿಕೆ ನೀಡಬೇಡಿ ಎಂದಿದ್ದಾರೆ.

ರಾಷ್ಟ್ರಪತಿ ಕಚೇರಿಯಿಂದ ಜಿ20 ಪ್ರತಿನಿಧಿಗಳಿಗೆ ಔತಕೂಟದ ಆಮಂತ್ರಣ ಪತ್ರ ಕಳುಹಿಸಲಾಗಿತ್ತು. ಇದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ ಪ್ರೆಸಿಡೆಂಟ್ ಆಫ್ ಭಾರತ್ ಎಂದು ಬರೆಯಲಾಗಿತ್ತು.

ಇದಾದ ನಂತರದಿಂದ ಭಾರತ್-ಇಂಡಿಯಾ ಚರ್ಚೆ ಆರಂಭವಾಗಿದ್ದು, ಪರ ವಿರೋಧ ನಡೆಯುತ್ತಲೇ ಇದೆ. ತದನಂತರ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಪೋಸ್ಟ್ ಒಂದರಲ್ಲಿ ಪ್ರಧಾನಿ ಮೋದಿ ಅವರನ್ನು ಪಿಎಂ ಆಫ್ ಭಾರತ್ ಎಂದು ಕರೆದಿದ್ದು, ಮತ್ತಷ್ಟು ಗೊಂದಲಗಳಿಗೆ ದಾರಿ ಮಾಡಿತ್ತು.

ಒಟ್ಟಾರೆ, ಭಾರತ್ ಇಂಡಿಯಾ ಹೆಸರು ಬದಲಾವಣೆ ಬಗ್ಗೆ ಯಾವುದೇ ಮಾತುಗಳನ್ನು ಆಡಬೇಡಿ ಎಂದು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!