ಕೀವ್’ನಲ್ಲಿ ವಾರಾಂತ್ಯ ಕರ್ಫ್ಯೂ ತೆರವು, ಅವಕಾಶ ಉಪಯೋಗಿಸಿಕೊಂಡು ಹೊರಬೀಳಲು ವಿದ್ಯಾರ್ಥಿಗಳಿಗೆ ಭಾರತದ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್ ರಾಜಧಾನಿ ಕೈವ್‌ನಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆದುಹಾಕಿದ್ದು, ಈ ಅವಕಾಶವನ್ನು ಬಳಸಿಕೊಂಡು ಹೊರಬರಲು ಉಕ್ರೇನ್‌ನಲ್ಲಿ ಸಿಲುಕಿರುವ ದೇಶದ ವಿದ್ಯಾರ್ಥಿಗಳಿಗೆ ಭಾರತ ಸಲಹೆ ನೀಡಿದೆ.

ಉಕ್ರೇನ್ ರೈಲ್ವೆಯು ಸ್ಥಳಾಂತರಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದ್ದು, ಎಲ್ಲಾ ವಿದ್ಯಾರ್ಥಿಗಳು ಪಶ್ಚಿಮ ಭಾಗಗಳಿಗೆ ಪ್ರಯಾಣಿಸಲು ರೈಲು ನಿಲ್ದಾಣಕ್ಕೆ ತೆರಳುವಂತೆ ಸೂಚಿಸಲಾಗಿದೆ.

ಪೋಲೆಂಡ್ ಬೇರೆ ರಾಷ್ಟ್ರದ ಜನರಿಗೆ ತಾಯ್ನಾಡಿಗೆ ಮರಳಲು ಸಹಾಯ ಮಾಡುತ್ತಿದೆ. ಭಾರತೀಯರಿಗೆ ವೀಸಾ ಅಗತ್ಯವಿಲ್ಲ. ರಾಷ್ಟ್ರೀಯತೆ ಆಧಾರದ ಮೇಲೆ ಯಾವುದೇ ತಾರತಮ್ಯ ಇಲ್ಲ. ಎಲ್ಲರೂ ಸರತಿ ಸಾಲಿನಲ್ಲಿ ಸಹಾಯ ಪಡೆಯುತ್ತಿದ್ದಾರೆ. ಹೆಚ್ಚಿನ ಜನಸಂದಣಿ ಇರುವ ಕಾರಣ ಸ್ಥಳಾಂತರ ಸಮಯ ತೆಗೆದುಕೊಳ್ಳುತ್ತಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!