ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಭಾರತ ಸಂಪೂರ್ಣ ಸಿದ್ಧ: ಇಟಲಿ ಪ್ರಧಾನಿಗೆ ಮೋದಿ ಭರವಸೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : 

ಭಾರತ ಪ್ರವಾಸದಲ್ಲಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರನ್ನು ಗುರುವಾರ ಸಂಜೆ ಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು

ಈ ವೇಳೆ ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಪ್ರಮುಖ ಪಾತ್ರವಹಿಸಬೇಕು ಎಂದು ಮೆಲೋನಿ ಹೇಳಿದ್ರು. ಇದಕ್ಕೆ ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ (Ukraine peace process) ತೊಡಗಿಕೊಳ್ಳಲು ಭಾರತ ಸಂಪೂರ್ಣ ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ (Narendra Modi) ಹೇಳಿದರು.

ದ್ವಿಪಕ್ಷೀಯ ಮಾತುಕತೆ ವೇಳೆ ಅನೇಕ ಜಾಗತಿಕ ವಿಚಾರಗಳ ಜತೆ ಉಕ್ರೇನ್ ಸಂಘರ್ಷದ ಬಗ್ಗೆಯೂ ಚರ್ಚೆಯಾಗಿದೆ. ವದೆಹಲಿಯಲ್ಲಿ ಜಿ20 ವಿದೇಶಾಂಗ ಸಚಿವರ ಸಭೆ ನಡೆಯುತ್ತಿರುವ ಸಂದರ್ಭದಲ್ಲೇ ಮೋದಿ ಈ ಹೇಳಿಕೆ ನೀಡಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ರಷ್ಯಾ – ಉಕ್ರೇನ್ ಯುದ್ಧದ ಆರಂಭದಿಂದಲೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದನ್ನು ಭಾರತ ಪ್ರತಿಪಾದಿಸುತ್ತಲೇ ಬಂದಿದೆ. ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಭಾರತ ಪೂರ್ಣ ಸಿದ್ಧವಿದೆ ಎಂದು ಮೋದಿ ಹೇಳಿದ್ದಾರೆ.

ಮೋದಿ ಜತೆ ಮಾಧ್ಯಮಗಳಿಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿದ ಜಾರ್ಜಿಯಾ ಮೆಲೋನಿ, ಜಿ20 ಅಧ್ಯಕ್ಷತೆ ವಹಿಸಿರುವ ಈ ಸಂದರ್ಭದಲ್ಲಿ ಉಕ್ರೇನ್​ನಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನಗಳಲ್ಲಿ ಬಾರತ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ಭಾವಿಸಿದ್ದೇನೆ. ಉಕ್ರೇನ್​ ಮೇಲಿನ ರಷ್ಯಾದ ಅತಿಕ್ರಮಣವನ್ನು ಬಲವಾಗಿ ಖಂಡಿಸುವುದಾಗಿಯೂ ಅವರು ಹೇಳಿದರು.

ಇಟಲಿ ಪ್ರಧಾನಿ ನನ್ನ ಜತೆ ಉಕ್ರೇನ್‌ನಲ್ಲಿ ಉಂಟಾಗಿರುವ ಮಾನವೀಯ ಬಿಕ್ಕಟ್ಟು ಮತ್ತು ಅಭಿವೃದ್ಧಿಹೊಂದುತ್ತಿರುವ ರಾಷ್ಟ್ರಗಳ ಮೇಲೆ ಈ ಬಿಕ್ಕಟ್ಟು ಬೀರಿರುವ ವ್ಯತಿರಿಕ್ತ ಪರಿಣಾಮದ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಉಕ್ರೇನ್ ಸಂಘರ್ಷದಿಂದ ಉಂಟಾದ ಆಹಾರ, ರಸಗೊಬ್ಬರ ಮತ್ತು ಇಂಧನ ಬಿಕ್ಕಟ್ಟಿನಿಂದ ಎಲ್ಲಾ ದೇಶಗಳು ತೊಂದರೆ ಅನುಭವಿಸುತ್ತಿವೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!