ಕಾಶ್ಮೀರಿ ಫೈಲ್ಸ್‌ ಚಿತ್ರದ ಮೂಲಕ ಬಿಜೆಪಿ ಸರ್ಕಾರ ದ್ವೇಷ ಹರಡಲು ಯತ್ನಿಸುತ್ತಿದೆ: ಕಾಂಗ್ರೆಸ್‌ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕಾಶ್ಮೀರಿ ಫೈಲ್ಸ್‌ ಚಿತ್ರದ ಮೂಲಕ ಕೇಂದ್ರ ಬಿಜೆಪಿ ಸರ್ಕಾರವು ಸಮಾಜದಲ್ಲಿ ದ್ವೇಷ ಬಿತ್ತಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ದೇಶವು ಯಾವುದೇ ಒಂದು ಸಿನೆಮಾದಿಂದ ನಡೆಯುವುದಿಲ್ಲ, ಅದು ಸರ್ಕಾರದ ನೀತಿ ಮತ್ತು ಆಡಳಿತದಿಂದ ನಡೆಸಲ್ಪಡುತ್ತದೆ. ಸಮಾಜದಲ್ಲಿ ದ್ವೇಷ ಹರಡುವ ಬದಲು ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರವು ಎಷ್ಟು ಕಾಶ್ಮೀರಿಗಳಿಗೆ ಪುನರ್ವಸತಿ ಮತ್ತು ಉದ್ಯೋಗ ಕಲ್ಪಿಸಿದೆ?. ಗಲಬೆಗಳ ನಿರಾಶ್ರಿತರಿಗೆ ಎಷ್ಟು ಪರಿಹಾರ ನೀಡಲಾಗಿದೆ ಎಂಬುದರ ಕುರಿತು ಮೋದಿಯವರು ಸ್ಪಷ್ಟ ಮಾಹಿತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಿನಿಮಾ ಪ್ರದರ್ಶಿಸಿ ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸಿ ಅಧಿಕಾರ ನಡೆಸಲು ಸಾಧ್ಯವಿಲ್ಲ. ಕಾಶ್ಮೀರಿ ಪಂಡಿತರು ವಲಸೆ ಹೋಗಿದ್ದು ಬಿಜೆಪಿ ಬೆಂಬಲಿತ ವಿಪಿ ಸಿಂಗ್ ಸರ್ಕಾರದ ಅವಧಿಯಲ್ಲಿ. ಆ ಸಮಯದಲ್ಲಿ ಬಿಜೆಪಿ ಸರ್ಕಾರವು ಸ್ಥಳೀಯ ಸರ್ಕಾರಕ್ಕೆ ನೀಡಿದ್ದ ಬೆಂಬಲ ಏಕೆ ಹಿಂತೆಗೆದುಕೊಳ್ಳಲಿಲ್ಲ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ಕಾಶ್ಮೀರಿಗಳಿಗೆ ಪುನರ್ವಸತಿ ಕಲ್ಪಿಸಿ ಅವರಿಗೆ ಉದ್ಯೋಗ ಮತ್ತು ವಸತಿ ವ್ಯವಸ್ಥೆ ಕಲ್ಪಿಸಿವೆ. ಆದರೆ ಮೋದಿ ಸರ್ಕಾರವು ಕಾಶ್ಮೀರದ ಕುರಿತು ಮಾತುಗಳನ್ನಾಡುವುದನ್ನು ಹೊರತುಪಡಿಸಿ ಬೇರೆ ಏನನ್ನೂ ಮಾಡಲಿಲ್ಲ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!