ಭಾರತ ಸ್ವಾರ್ಥಿ ರಾಷ್ಟ್ರವಲ್ಲ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ತತ್ವದಲ್ಲಿ ನಂಬಿಕೆ ಇರಿಸಿದೆ: ಮೋಹನ್‌ ಭಾಗವತ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತವು ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುವುದರಲ್ಲಿ ನಂಬಿಕೆ ಇಟ್ಟಿದೆ. ಇಂದು ವಿಶ್ವದ ಹಲವು ರಾಷ್ಟ್ರಗಳು ಭಾರತದತ್ತ ನೋಡುತ್ತಿವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದರು.

ಲುಧಿಯಾನದ ಸದ್ಗುರು ಪ್ರತಾಪ್ ಸಿಂಗ್ ಮತ್ತು ಮಾತಾ ಭೂಪಿಂದರ್ ಕೌರ್ ಅವರ ಸ್ಮರಣಾರ್ಥ ನಾಮಧಾರಿ ಮಿಷನ್ ಭಾನುವಾರ ‘ಭೈನಿ ಸಾಹಿಬ್‌’ನಲ್ಲಿ ಆಯೋಜಿಸಿದ್ದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ವಿಶ್ವದಲ್ಲಿ ಸಮತೋಲನ ಸಾಧಿಸುವ ಕೆಲಸವನ್ನು ಭಾರತ ಮಾಡುತ್ತಿದೆ. ತನ್ನ ಪಾತ್ರವನ್ನು ಉತ್ತಮವಾಗಿ ನಿರ್ವಹಿಸುತ್ತಿದೆ. ಭಾರತ ಸ್ವಾರ್ಥಿ ರಾಷ್ಟ್ರವಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ತತ್ವದಲ್ಲಿ ನಂಬಿಕೆ ಇರಿಸಿದೆ’ ಎಂದು ಹೇಳಿದರು.

ಇಂದು ಸಮಾಜದ ವಿಭಜಕ ಶಕ್ತಿಗಳು ದೇಶವನ್ನು ಮಾತ್ರವಲ್ಲದೆ ಜಗತ್ತನ್ನೂ ಹಾನಿಗೊಳಿಸುತ್ತಿವೆ.ಇದರ ವಿರುದ್ಧಜಂಟಿಯಾಗಿ ಹೋರಾಡಬೇಕು. ಇದಕ್ಕೆ ಭಾರತವು ಇಡೀ ಜಗತ್ತಿಗೆ ಹೊಸ ಮಾರ್ಗವನ್ನು ತೋರಿಸಬೇಕಿದೆ. ಅದೇ ಸಂದರ್ಭದಲ್ಲಿ ಸಂಪ್ರದಾಯ, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಭಾಗವತ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!