ʻಭಾರತ ಇನ್ನು ಮುಂದೆ ಕಾಂಗ್ರೆಸ್‌ನ ಅಧಿಪತ್ಯವಲ್ಲ, ಈ ಸತ್ಯ ಅವರಿಂದ ಅರಗಿಸಿಕೊಳ್ಳಲು ಸಾಧ್ಯವಿಲ್ಲʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್‌ನಲ್ಲಿ ಭಾರತದ ಕುರಿತು ಹೇಳಿಕೆಗಳ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ವಾಗ್ದಾಳಿ ನಡೆಸಿದರು. ಭಾರತವು ಇನ್ನು ಮುಂದೆ ಅವರ ಅಧಿಪತ್ಯವಲ್ಲ, ಆ ಪಕ್ಷಕ್ಕೆ ಈ ಸತ್ಯವನ್ನು ಅರಗಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಟೀಕಿಸಿದರು.

ರಾಹುಲ್ ಗಾಂಧಿ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ತೊಂದರೆಗೆ ಸಿಲುಕಿದರೆ, ಅದಕ್ಕೂ ನಮಗೂ ಸಂಬಂಧವಿಲ್ಲ. ಆದರೆ, ನಮ್ಮ ದೇಶವನ್ನು ದೂಷಿಸಿದರೆ, ಈ ದೇಶದ ಪ್ರಜೆಗಳಾಗಿ ನಾವು ಸುಮ್ಮನಿರಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ನೀವು ಎಷ್ಟು ಬೇಕಾದರೂ ನಮ್ಮನ್ನು ನಿಂದಿಸಿ ಆದರೆ ರಾಷ್ಟ್ರವನ್ನು ಅವಮಾನಿಸಲು ಮಾತ್ರ ನಾವು ಬಿಡಲಾರೆವು.

ರಾಹುಲ್ ಅವರು ನ್ಯಾಯಾಂಗವನ್ನು ಅವಮಾನಿಸಿದ್ದಾರೆ, ನಮ್ಮ ನ್ಯಾಯಾಂಗ ವ್ಯವಸ್ಥೆಯು ದೃಢವಾಗಿದೆ, ರಾಹುಲ್ ದೇಶದ ಕ್ಷಮೆಯಾಚಿಸಬೇಕು ಎಂಬುದು ಒಂದೇ ನಮ್ಮ ಬೇಡಿಕೆಯಾಗಿದೆ. ಕಾಂಗ್ರೆಸ್ ಮತ್ತು ರಾಹುಲ್ ಅವರನ್ನು ಈ ದೇಶದ ಜನರು ತಿರಸ್ಕರಿಸಿದ್ದಾರೆ. ಅವರು ನಮ್ಮ ಪ್ರಜಾಪ್ರಭುತ್ವ ಮತ್ತು ಸಂಸತ್ತಿನ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಇದು ಸ್ವೀಕಾರಾರ್ಹವಲ್ಲ.

ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದು ರಾಹುಲ್ ಸುಳ್ಳು ಹೇಳಿದ್ದಾರೆಂದು ರಿಜಿಜು ಆರೋಪಿಸಿದರು. ಸಂಸತ್ತಿನಲ್ಲಿ ಸಂಸದರಾಗಿರುವ ಅವರು ಸಂಸತ್ತಿಗೆ ಅವಮಾನ ಮಾಡಿದ್ದಾರೆ, ಇದು ಅತ್ಯಂತ ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!