ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ ಈಗ ಜಪಾನ್‌ಗಿಂತ ಮುಂದಿದ್ದು, 1,08,494 ಗಿಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಈ ಮಾಹಿತಿ ಹಂಚಿಕೊಂಡ ಸಚಿವರು, ಜಪಾನ್ ಸದ್ಯ 96,459 ಗಿಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದ್ದರೆ ಭಾರತ 1,08,494 ಗಿಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ಮುಂಚೂಣಿಯಲ್ಲಿದೆ.
ಸೌರಶಕ್ತಿ ಉತ್ಪಾದನೆಯಲ್ಲಿ ಭಾರತವೀಗ ಜಪಾನ್ ಅನ್ನು ಹಿಂದಿಕ್ಕುವ ಮೂಲಕ ಮೂರನೇ ಅತಿದೊಡ್ಡ ದೇಶವಾಗಿ ಹೊರಹೊಮ್ಮಿದೆ. ಚೀನಾ ಮತ್ತು ಅಮೆರಿಕ ನಂತರದ ಸ್ಥಾನದಲ್ಲಿ ಭಾರತ ರಾರಾಜಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.