ಹೊಸದಿಗಂತ ಯಾದಗಿರಿ:
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತ ಜಾಗತಿಕ ಮಟ್ಟದಲ್ಲಿ ಅತ್ಯಂತ ಎತ್ತರಕ್ಕೆ ಬೆಳೆಯುತ್ತಿದೆ ಎಂದು ಮಾಜಿ ಸಂಸದ ಡಾ.ಉಮೇಶ್ ಜಾಧವ್ ತಿಳಿಸಿದರು.
ಕಳೆದ 11ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಲವು ದಶಕಗಳ ಜಡತ್ವ ಮುರಿದು ದಿಟ್ಟ ನಿರ್ಧಾರಗಳ ಮೂಲಕ ವಿಕಸಿತ ಭಾರತಕ್ಕೆ ಭದ್ರ ಬುನಾದಿ ಹಾಕಿದ ಹಿನ್ನಲೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬರಿಗೂ ಕೇಂದ್ರ ಸರ್ಕಾರದ ಸಾಧನೆ, ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಹೇಳಲು ಜೂ 23 ರವರೆಗೆ ವಿವಿಧ ಕಾರ್ಯಕ್ರಮಗಳು ಜಿಲ್ಲಾ,ತಾಲೂಕು, ಮಂಡಲ ಮತ್ತು ಬೂತ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮಾಜಿ ಎಂಎಲ್ ಸಿ ಅಮರನಾಥ ಪಾಟೀಲ್ ಮಾತನಾಡಿ,ವಿಕಸಿತ ಭಾರತದ ಅಮೃತ ಕಾಲ ಮತ್ತು ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣಕ್ಕೆ 11ವರ್ಷ ಎಂಬ ಘೋಷಣೆಯಡಿ ಕಳೆದ ಜೂ.9ರಿಂದಲೇ ಎಲ್ಲಡೆ ಕಾರ್ಯಕ್ರಮಗಳು ಆರಂಭಗೊಂಡಿವೆ. ಅದೇ ತೆರನಾಗಿ ಜಿಲ್ಲೆಯಲ್ಲಿ ಮಾಡಬೇಕಾದ ಕೆಲಸ, ಕಾರ್ಯಗಳ ಬಗ್ಗೆ ಇಂದು ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಪದಾಧಿಕಾರಿಗಳ, ಮುಖಂಡರ, ಪ್ರಮುಖರ ಜೊತೆ ಸಮಗ್ರ ಚರ್ಚೆ ನಡೆಸಿ ನಿಗದಿ ಪಡಿಸಿರುವ ದಿನಾಂಕಗಳಂದು ಕಾರ್ಯಕ್ರಮಗಳು ನಡೆಸುವ ಮೂಲಕ ಕೇಂದ್ರ ಸರ್ಕಾರದ ಪ್ರತಿಯೊಂದು ಸಾಧನೆ ಮತ್ತು ಅಭಿವೃದ್ಧಿ ಕೆಲಸಗಳ ಬಗ್ಗೆ ಜನತೆಗೆ ತಿಳಿಸುವ ಯಶಸ್ಸಿಗೊಳಿಸಲಾಗುವುದೆಂದರು.