Wednesday, July 6, 2022

Latest Posts

ಆಫ್ಘನ್ ಜೈಲಿನಿಂದ ಬಿಡುಗಡೆಯಾದ ಜೈಶ್ ಉಗ್ರರ ಟಾರ್ಗೆಟ್ ಭಾರತ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಸಂದರ್ಭದಲ್ಲಿ ಅಲ್ಲಿನ ಜೈಲಿನಲ್ಲಿದ್ದ ಉಗ್ರರನ್ನು ಬಿಡುಗಡೆ ಮಾಡಿದೆ.
ಆಫ್ಘನ್ ಜೈಲಿನಿಂದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ 100 ಕ್ಕೂ ಹೆಚ್ಚು ಉಗ್ರರನ್ನು ಬಿಡುಗಡೆ ಮಾಡಲಾಗಿದೆ. ಜೈಶ್ ಉಗ್ರರು ಭಾರತದ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದಾರೆ ಎಂದು ಗುಪ್ತರಚ ಇಲಾಖೆ ವರದಿ ತಿಳಿಸಿದೆ.
ಪ್ರಮುಖವಾಗಿ ಉಗ್ರರು ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ನಡೆಸಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.
ಅಫ್ಘಾನಿಸ್ತಾನವನ್ನು ತಾಲಿಬಾನ್ ಕಬ್ಝಾ ಮಾಡಿದಂತೆ ಭಾರತದ ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ನಡೆಸಿ ಹಿಡಿತಕ್ಕೆ ತೆಗೆದುಕೊಳ್ಳುವ ಆಲೋಚನೆಯನ್ನು ಜೈಶ್ ಮಾಡಿದೆ.
ಈ ಬಗ್ಗೆ ಜೈಶ್ ಮುಖ್ಯಸ್ಥ ಮಸೂದ್ ಅಜ್‌ಹರ್ ತಮ್ಮ ಉಗ್ರ ಸಂಘಟನೆಯ ಕಾರ್ಯಕರ್ತರಿಗೆ ಸೂಚನೆ ನೀಡುತ್ತಿದ್ದಾರೆ ಎನ್ನುವ ಮಾಹಿತಿ ದೊರತಿದೆ.
ಈಗಾಗಲೇ ತಾಲಿಬಾನ್ ಹಾಗೂ ಜೈಶ್ ಸಂಘಟನೆ ನಾಯಕರು ಜೊತೆ ಸೇರಿ ಸಭೆ ನಡೆಸಿದ್ದು, ಭಾರತವೇ ಮುಂದಿನ ಟಾರ್ಗೆಟ್ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಕಂಡ ಪಾಕಿಸ್ತಾನದ ಜೈಶ್ ಸಂಘಟನೆ ನಾವು ಇದೇ ರೀತಿ ಮಾಡಬಹುದು ಎನ್ನುವ ಯೋಜನೆ ಹಾಕಿವೆ. ಆಫ್ಘನ್‌ನ ಬೆಳವಣಿಗೆ ಜೈಶ್ ಸಂಘಟನೆಗೆ ಬಲ ತುಂಬಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss