WORLD CUP 2023 | ಇಂದು ಭಾರತ-ಲಂಕಾ ಮುಖಾಮುಖಿ, ಸೆಮೀಸ್ ಸೇರುವ ತವಕ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಭಾರತ-ಶ್ರೀಲಂಕಾ ಎದುರಾಗಲಿದೆ.

12 ವರ್ಷಗಳ ಬಳಿಕ ಟೀಂ ಇಂಡಿಯಾ-ಶ್ರೀಲಂಕಾ ವಾಂಖೆಡೆ ಸ್ಟೇಡಿಯಂನಲ್ಲಿ ಸೆಣೆಸಾಡಲಿದ್ದು, ಪಂದ್ಯ ವೀಕ್ಷಿಸಲು ಅಭಿಮಾನಿಗಳು ಕಾತರರಾಗಿದ್ದಾರೆ.

2011 ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಇದೇ ಕ್ರೀಡಾಂಗಣದಲ್ಲಿ ಲಂಕಾ ತಂಡವನ್ನು ಮಣಿಸಿ ವಿಶ್ವಕಪ್‌ಗೆ ಮುತ್ತಿಕ್ಕಿತ್ತು.

ಈ ಬಾರಿ ವಿಶ್ವಕಪ್‌ನಲ್ಲಿ ಸತತ ಆರು ಗೆಲುವು ಕಂಡಿರುವ ಟೀಂ ಇಂಡಿಯಾ ಏಳನೇ ಗೆಲುವು ಸಾಧಿಸಿ ಸೆಮೀಸ್ ಪ್ರವೇಶಿಸುವ ತವಕದಲ್ಲಿದೆ. ಇತ್ತ ಲಂಕಾಗೆ ಇದು ಮಾಡು ಇಲ್ಲವೇ ಮಡಿ ಹಂತದ ಪಂದ್ಯವಾಗಿದ್ದು, ಸೆಮೀಸ್ ರೇಸ್‌ನಲ್ಲಿ ಉಳಿಯಲು ಈ ಪಂದ್ಯ ಗೆಲ್ಲಲೇಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!