ಕೊರೊನಾ ವರದಿ: 24ಗಂಟೆಗಳಲ್ಲಿ 16ಸಾವಿರ ದಾಟಿದ ಪಾಸಿಟಿವ್‌ ಪ್ರಕರಣಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ ಕೋವಿಡ್ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 16,167 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೆ 41 ಮಂದಿ ಸಾವನ್ನಪ್ಪಿರುರವುದಾಗಿ ಕೇಂದ್ರ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ. ಕೇಂದ್ರೀಯ ಅಂಕಿಅಂಶಗಳ ಪ್ರಕಾರ, ಇದುವರೆಗೆ 4,41,61,899 ಜನರು ಕರೋನಾ ಸೋಂಕಿಗೆ ಒಳಗಾಗಿದ್ದಾರೆ. 5,26,730 ಜನರು ಸಾವನ್ನಪ್ಪಿದ್ದಾರೆ.

ಭಾನುವಾರ 18,738 ಪ್ರಕರಣಗಳು ದಾಖಲಾಗಿದ್ದರೆ, ಸೋಮವಾರ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,35,510. ಸಕ್ರಿಯ ಪ್ರಕರಣಗಳ ಶೇಕಡಾವಾರು 0.31ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15,549 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೆ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 4,34,99,659.

ಪ್ರಸ್ತುತ ದಿನನಿತ್ಯದ ಧನಾತ್ಮಕತೆಯ ದರವು 6.14 ಪ್ರತಿಶತವಾಗಿದ್ದರೆ ವಾರದ ಧನಾತ್ಮಕತೆಯ ದರವು 4.64 ಪ್ರತಿಶತವಾಗಿದೆ. ಕಳೆದ 24 ಗಂಟೆಗಳಲ್ಲಿ 2,63,419 ಜನರನ್ನು ಪರೀಕ್ಷಿಸಲಾಗಿದೆ. ದೇಶದಲ್ಲಿ ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿ ಮುಂದುವರಿದಿದೆ. ಇಲ್ಲಿಯವರೆಗೆ ಒಟ್ಟು 206 ಕೋಟಿ ಲಸಿಕೆಗಳನ್ನು ಪೂರ್ಣಗೊಳಿಸಲಾಗಿದೆ. ಇವುಗಳಲ್ಲಿ 10.88 ಕೋಟಿ ಬೂಸ್ಟರ್ ಡೋಸ್ ಕೂಡ ಲಭ್ಯವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!