ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು: 1000ನೇ ಪಂದ್ಯ ಆಡಲು ಭಾರತ ಸಜ್ಜು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ಕ್ರಿಕೆಟ್‌ ತಂಡ ಈಗ ಐತಿಹಾಸಿಕ 1000ನೇ ಏಕದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ.
ನಾಳೆ ಭಾನುವಾರ ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯಲಿದರುವ ಒಂದು ಸಾವಿರನೇ ಏಕದಿನ ಕ್ರಿಕೆಟ್‌ ಪಂದ್ಯ ಇದಾಗಿದೆ. ಒಂದು ಸಾವಿರ ಏಕದಿನ ಪಂದ್ಯಗಳನ್ನಾಡಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ. ತಂಡದ ನಾಯಕತ್ವವನ್ನು ರೋಹಿತ್‌ ಶರ್ಮಾ ವಹಿಸಿಕೊಂಡಿದ್ದಾರೆ.
ಮೋಟೇರಾದಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ತಂಡದ ಆಟಗಾರರು ನೆಟ್ಸ್‌ ಅಭ್ಯಾಸ ನಡೆಸುತ್ತಿದ್ದಾರೆ. ಕೋವಿಡ್‌ ಸೋಂಕಿಗೆ ಒಳಗಾಗಿರುವ ತಂಡದ ಬ್ಯಾಟರ್‌ ಶಿಖರ್‌ ಧವನ್‌, ಶ್ರೇಯಸ್‌ ಅಯ್ಯರ್‌ ಮತ್ತು ಋತುರಾಜ್‌ ಗಾಯಕವಾಡ್‌ ಅವರನ್ನು ಪ್ರತ್ಯೇಕವಾಗಿರಿಸಲಾಗಿದೆ.
1974ರಲ್ಲಿ ಭಾರತ ಮೊದಲ ಏಕದಿನ ಪಂದ್ಯವಾಡಿತ್ತು. ಅಂದು ಅಜಿತ್‌ ವಾಡೇಕರ್‌ ತಂಡವನ್ನು ಮುನ್ನಡೆಸಿದ್ದರು. ಈವರೆಗೆ ಟೀಂ ಇಂಡಿಯಾಗೆ ಒಟ್ಟು 26 ಆಟಗಾರರು ಏಕದಿನ ಪಂದ್ಯಗಳ ನಾಯಕತ್ವ ವಹಿಸಿಕೊಂಡಿದ್ದಾರೆ. ಸಾವಿರ ಪಂದ್ಯಗಳಲ್ಲಿ 200ಕ್ಕೂ ಹೆಚ್ಚು ಪಂದ್ಯಗಳಲ್ಲಿ ಎಂ.ಎಸ್‌. ಧೋನಿ ತಂಡವನ್ನು ಮುನ್ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!