ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 7 ವಿಕೆಟ್‌ಗಳಿಂದ ಜಯಗಳಿಸಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ ಗೆಲ್ಲು 95 ರನ್‌ಗಳ ಸುಲಭ ಸವಾಲನ್ನು ಪಡೆದ ಭಾರತ 17.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 98 ರನ್ ಹೊಡೆಯುವ ಮೂಲಕ ಜಯ ಸಾಧಿಸಿ ಎರಡು ಪಂದ್ಯಗಳ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿಕೊಂಡಿದೆ.
ಭಾರತದ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 51 ರನ್ (45 ಎಸೆತ, 8 ಬೌಂಡರಿ, 1 ಸಿಕ್ಸರ್) ಹೊಡೆದರೆ ವಿರಾಟ್ ಕೊಹ್ಲಿ ಔಟಾಗದೇ 29 ರನ್ (37 ಎಸೆತ, 4 ಬೌಂಡರಿ) ಹೊಡೆದರು.
ಇದಕ್ಕೂ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾ 47 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯ್ತು.
ಮಳೆಯಿಂದ ಮೊದಲ ದಿನ ಕೇವಲ 35 ಓವರ್ ಮಾತ್ರ ಬೌಲ್ ಮಾಡಲು ಸಾಧ್ಯವಾಗಿತ್ತು. 2 ಮತ್ತು 3ನೇ ದಿನ ಮಳೆಯಿಂದ ಕಾರಣ ಪಂದ್ಯ ನಡೆಯಲಿಲ್ಲ. 4 ದಿನದಿಂದ ಪಂದ್ಯ ಸರಿಯಾಗಿ ಆರಂಭವಾಗಿತ್ತು. ಭಾರತ ಟಿ20 ಮಾದರಿಯಲ್ಲಿ ಬ್ಯಾಟ್ ಬೀಸಿತ್ತು. ಪರಿಣಾಮ 285 ಗಳಿಸಿತ್ತು.