ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಿಂದೂ ರಾಷ್ಟ್ರವಾಗಬೇಕು, ಆ ನಿಟ್ಟಿನಲ್ಲಿ ಎಲ್ಲ ಕೆಲಸ ಮಾಡುತ್ತೇನೆ ಎಂದು ನಟಿ , ಅಭ್ಯರ್ಥಿ ಕಂಗನಾ ರಣೌತ್ ಹೇಳಿದ್ದಾರೆ.
ಕಂಗನಾ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಚಿಂತನೆಯ ಸ್ವಾತಂತ್ರ್ಯ, ಸನಾತನ ಸ್ವಾತಂತ್ರ್ಯ, ನಮ್ಮ ಧರ್ಮವನ್ನು ಸ್ವೀಕರಿಸುವ ಸ್ವಾತಂತ್ರ್ಯ, ಈ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಸ್ವಾತಂತ್ರ್ಯ ನಮಗೆ ಸಿಕ್ಕಿದೆ. ಆದರೆ 1947ರಲ್ಲಿ ಪಾಕಿಸ್ತಾನವನ್ನು ತನ್ನ ಧರ್ಮದ ಆಧಾರದ ಮೇಲೆ ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಿದಾಗ, ಭಾರತವನ್ನು ಹಿಂದೂ ರಾಷ್ಟ್ರವೆಂದು ಏಕೆ ಘೋಷಿಸಲಿಲ್ಲ? ನಾವು ಅದನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಂಗನಾ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ಅವರ ಎದುರು ಕಂಗನಾ ಕಣಕ್ಕಿಳಿದಿದ್ದಾರೆ.