ವಿಪಕ್ಷಗಳ ಮಹಾಮೈತ್ರಿಕೂಟಕ್ಕೆ ‘INDIA’ ನಾಮಕರಣ: ಖರ್ಗೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಸಭೆ ಸೇರಿದ ವಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘ಇಂಡಿಯನ್​ ನ್ಯಾಷನಲ್ ಡೆಮಾಕ್ರಟಿಕ್​​ ಇನ್​ಕ್ಲೂಸಿವ್​​​​ ಅಲೈನ್ಸ್ (INDIA / Indian National Developmental Inclusive Alliance) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಘೋಷಣೆ ಮಾಡಿದರು.

ಮಹಾಘಟಬಂಧನ್ ಸಭೆಯಲ್ಲಿ ಈ ಕುರಿತು ನಡೆದ ನಿರಂತರ ಚರ್ಚೆ ಬಳಿಕ ಖರ್ಗೆ ಈ ನಿರ್ಧಾರ ಘೋಷಿಸಿದರು.

ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಖರ್ಗೆ ತಿಳಿಸಿದರು.

26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮಹಾರಾಷ್ಟ್ರ, ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್​​ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!