September 15, 2026
Tuesday, September 15, 2026
spot_img

ಭಾರತ ತೈಲ ಖರೀದಿಸೋಕೆ ದೊಡ್ಡಣ್ಣನ ಒಪ್ಪಿಗೆ ಬೇಕು: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗೋಲಾಘಾಟ್‌ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಇಂಧನ ಭದ್ರತೆ ಮತ್ತು ವಿದೇಶಾಂಗ ಸ್ವಾಯತ್ತತೆ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ರಾಹುಲ್ ಗಾಂಧಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ಉಲ್ಲೇಖಿಸಿ, ಭಾರತವು ಯಾವುದೇ ದೇಶದಿಂದ ತೈಲ ಖರೀದಿಸಬೇಕಾದರೂ ಈಗ ಅಮೆರಿಕದ ಅನುಮತಿ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳ ಪರಿಣಾಮವಾಗಿ ದೇಶದ ಇಂಧನ ಭದ್ರತೆ ಮತ್ತು ಮಹತ್ವದ ಡೇಟಾ ಅಮೆರಿಕದ ಪ್ರಭಾವಕ್ಕೆ ಒಳಗಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ:

ಈ ಹೇಳಿಕೆಗಳ ಮೂಲಕ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದ ರಾಹುಲ್ ಗಾಂಧಿ, ಭಾರತ ತನ್ನ ಸ್ವತಂತ್ರ ನಿರ್ಧಾರ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದೇ ವೇಳೆ ಅವರು ಬಿಜೆಪಿ ನೇತೃತ್ವದ ಸರ್ಕಾರದ ಆರ್ಥಿಕ ಮತ್ತು ರಾಜಕೀಯ ನಿರ್ಧಾರಗಳ ಮೇಲೂ ಟೀಕಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !