ಭಾರತ VS ನೆದರ್‌ಲೆಂಡ್ ಟಿ 20 : ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಐಸಿಸಿ ಟಿ20  ವಿಶ್ವಕಪ್ ಪಂದ್ಯ ನಡೆಯುತ್ತಿದ್ದು, ಇಂದು ಭಾರತ, ನೆದರ್‌ಲೆಂಡ್ ಮುಖಾಮುಖಿಯಾಗಿದೆ.

ಟೀಂ ಇಂಡಿಯಾ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ಕೆ ಮಾಡಿದೆ. ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ ಈ ಪಮದ್ಯವನ್ನು ಗೆಲ್ಲುವ ತವಕದಲ್ಲಿದೆ. ಪಾಕಿಸ್ತಾನ ವಿರುದ್ಧ ಆಡಿದ ತಂಡವೇ ಈಗಲೂ ಇದೆ, ಇಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಅತ್ತ ನೆದರ್‌ಲೆಂಡ್ಸ್ ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡಿದ್ದು, ಇನ್ನೇನು ಗೆಲ್ಲುವ ಹಂತಕ್ಕೆ ಬಂದು ಸೋಲು ಕಂಡಿತ್ತು. ಇದೀಗ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಭಾರತ ದ್ವಿತೀಯ ಸ್ಥಾನದಲ್ಲಿದೆ. ಹೀಗಾಗಿ ಎರಡೂ ತಂಡಗಳಿಗೆ ಇದು ಮುಖ್ಯವಾದ ಪಂದ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!