August 24, 2026
Monday, August 24, 2026
spot_img

ಭಾರತಕ್ಕೆ ಹೊಸ ಸಿಡಿಎಸ್, ನೌಕಾಪಡೆ ಮುಖ್ಯಸ್ಥರ ನೇಮಕ : ತಿಂಗಳಾಂತ್ಯಕ್ಕೆ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ ಸರ್ಕಾರವು ದೇಶದ ರಕ್ಷಣಾ ಪಡೆಗಳಿಗೆ ಹೊಸ ಮುಖ್ಯಸ್ಥರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಜನರಲ್ ಅನಿಲ್ ಚೌಹಾಣ್ ನಂತರ ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜ ಸುಬ್ರಮಣಿ ಭಾರತದ ನೂತನ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅದೇ ರೀತಿ, ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಉತ್ತರಾಧಿಕಾರಿಯಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ನೂತನ ನೌಕಾಪಡೆ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.

ಲೆಫ್ಟಿನೆಂಟ್ ಜನರಲ್ ಎನ್.ಎಸ್. ರಾಜ ಸುಬ್ರಮಣಿ, ಮೇ 30, 2026 ರಂದು ಜನರಲ್ ಅನಿಲ್ ಚೌಹಾಣ್ ಅಧಿಕಾರಾವಧಿ ಮುಗಿದ ನಂತರ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇವರು ಭಾರತ ಸರ್ಕಾರದ ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. 35 ವರ್ಷಗಳ ಸುದೀರ್ಘ ವೃತ್ತಿಜೀವನ ಹೊಂದಿರುವ ಇವರು, ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದ ಮಿಲಿಟರಿ ಸಲಹೆಗಾರರಾಗಿ ಮತ್ತು ಸೇನಾ ಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.

ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಮೇ 31 ರಂದು ಅಧಿಕಾರ ಸ್ವೀಕರಿಸಲಿದ್ದು, ಪ್ರಸ್ತುತ ಪಶ್ಚಿಮ ನೌಕಾ ಕಮಾಂಡ್‌ನ ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಐಎನ್‌ಎಸ್ ವಿಕ್ರಮಾದಿತ್ಯ ಯುದ್ಧನೌಕೆಯ ಕಮಾಂಡರ್ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ ಮತ್ತು ಅತಿ ವಿಶಿಷ್ಟ ಸೇವಾ ಪದಕ ಪುರಸ್ಕೃತರಾಗಿದ್ದಾರೆ.

ಈ ಇಬ್ಬರೂ ಅಧಿಕಾರಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿದ್ದು, ದೇಶದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !