January 31, 2026
Saturday, January 31, 2026
spot_img

ಭಾರತ-ನ್ಯೂಜಿಲೆಂಡ್ ಲಾಸ್ಟ್ ಟಿ20 ಮ್ಯಾಚ್: ಟಾಸ್ ಗೆದ್ದ ಸೂರ್ಯ ಬ್ಯಾಟಿಂಗ್ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಕೊನೆಯ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವು ಟಿ20 ವಿಶ್ವಕಪ್‌ಗೆ ಮುನ್ನ ಟೀಂ ಇಂಡಿಯಾದ ಕೊನೆಯ ಪಂದ್ಯವಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದ್ದು, ಅಕ್ಷರ್ ಪಟೇಲ್ ಮತ್ತು ಇಶಾನ್ ಕಿಶನ್ ತಂಡಕ್ಕೆ ಮರಳಿದ್ದಾರೆ. ವರುಣ್ ಚಕ್ರವರ್ತಿ ಕೂಡ ಆಡಲಿದ್ದಾರೆ. ನ್ಯೂಜಿಲೆಂಡ್ ಕಳೆದ ಪಂದ್ಯಕ್ಕೆ ಹೋಲಿಸಿದರೆ ಈ ಪಂದ್ಯಕ್ಕೆ ನಾಲ್ಕು ಬದಲಾವಣೆಗಳನ್ನು ಮಾಡಿದೆ. ಡೆವೊನ್ ಕಾನ್ವೇ ಬದಲಿಗೆ ಫಿನ್ ಅಲೆನ್, ಜಾಕೋಬ್ ಡಫಿ ಬದಲಿಗೆ ಮಾರ್ಕ್ ಚಾಪ್ಮನ್ ಮತ್ತು ಮ್ಯಾಟ್ ಹೆನ್ರಿ ಬದಲಿಗೆ ಲಾಕಿ ಫರ್ಗುಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕೈಲ್ ಜೇಮಿಸನ್ ಕೂಡ ಈ ಪಂದ್ಯದಲ್ಲಿ ಆಡಲಿದ್ದಾರೆ.

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ತಂಡ: ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಬೆವನ್ ಜಾಕೋಬ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !