ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಗೆದ್ದ ಸೂರ್ಯ ಪಡೆ ಎರಡನೇ ಮ್ಯಾಚ್ ನತ್ತ ಕಣ್ಣಿಟ್ಟಿದ್ದು, ಇಂದು ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧ ಎರಡನೇ ಟಿ20 ಪಂದ್ಯವನ್ನು ಗೆಲುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸುವ ಗುರಿ ಹೊಂದಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪಂದ್ಯ ಸಂಜೆ 7:00 ಗಂಟೆಗೆ ಪ್ರಾರಂಭವಾಗುತ್ತದೆ. ಟಾಸ್ ಅದಕ್ಕೂ ಅರ್ಧ ಗಂಟೆ ಮೊದಲು, ಅಂದರೆ ಸಂಜೆ 6:30 ಕ್ಕೆ ನಡೆಯಲಿದೆ.
ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ಪ್ರಸಾರ ಮಾಡುತ್ತಿದೆ ಮತ್ತು ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗುತ್ತದೆ. ಹೆಚ್ಚುವರಿಯಾಗಿ, ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಪಂದ್ಯಗಳನ್ನು ನೇರ ಪ್ರಸಾರ ಮಾಡಲಾಗುತ್ತದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.


