January14, 2026
Wednesday, January 14, 2026
spot_img

ಜನವರಿ 11ರಿಂದ ಭಾರತ–ನ್ಯೂಝಿಲೆಂಡ್ ಸರಣಿ: ಇಬ್ಬರು ಸ್ಟಾರ್ ಆಟಗಾರರು ಅಲಭ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ದ್ವಿಪಕ್ಷೀಯ ಸರಣಿ ಜನವರಿ 11ರಿಂದ ಆರಂಭವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು ಎಂಟು ಪಂದ್ಯಗಳಲ್ಲಿ ಮುಖಾಮುಖಿಯಾಗಲಿದ್ದು, ಇದರಲ್ಲಿ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳು ಸೇರಿವೆ. ಆದರೆ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ಆಟಗಾರರು ಕಣಕ್ಕಿಳಿಯುವುದಿಲ್ಲ ಎಂಬುದು ಇದೀಗ ದೃಢವಾಗಿದೆ.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾಗವಹಿಸಿದ್ದ ವೇಗಿ ಜಸ್‌ಪ್ರೀತ್ ಬುಮ್ರಾಗೆ ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಇದೇ ಕಾರಣದಿಂದ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರು ಹೊರಗುಳಿಯಲಿದ್ದಾರೆ. ಹೀಗೆಯೇ ಭರ್ಜರಿ ಫಾರ್ಮ್‌ನಲ್ಲಿರುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ವಿಶ್ವಕಪ್ ತಯಾರಿಯ ಭಾಗವಾಗಿ ಏಕದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ಇದಕ್ಕೂ ಮೊದಲು ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿಯೂ ಈ ಇಬ್ಬರು ಆಟಗಾರರು ತಂಡದಲ್ಲಿರಲಿಲ್ಲ. ಆದರೆ ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಬುಮ್ರಾ ಮತ್ತು ಹಾರ್ದಿಕ್ ಮರಳಿ ಕಣಕ್ಕಿಳಿಯಲಿದ್ದಾರೆ. ಈ ನಡುವೆ, ಶುಭ್‌ಮನ್ ಗಿಲ್ ನಾಯಕತ್ವದಡಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಅನುಭವಿಗಳೂ ಯುವ ಆಟಗಾರರೂ ಸೇರಿರುವ ಸಂಭಾವ್ಯ ಏಕದಿನ ತಂಡವನ್ನು ಆಯ್ಕೆ ಮಾಡಲಾಗಿದೆ. ಈ ಸರಣಿ ವಿಶ್ವಕಪ್‌ಗೆ ಮುನ್ನ ತಂಡದ ಸಂಯೋಜನೆ ಪರೀಕ್ಷೆಗೆ ಮಹತ್ವದ ವೇದಿಕೆಯಾಗಲಿದೆ.

Most Read

error: Content is protected !!