ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯುತ್ತಿದೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು ಈಗಾಗಲೇ ಸರಣಿಯನ್ನು ವಶಪಡಿಸಿಕೊಂಡಿದೆ ಇತ್ತ ಸರಣಿ ಸೋತಿರುವ ನ್ಯೂಜಿಲೆಂಡ್ ಉಳಿದೆರಡು ಪಂದ್ಯಗಳನ್ನು ಗೆದ್ದು ಸೋಲಿನ ಅಂತರವನ್ನು ಕಡಿಮೆ ಮಾಡಲು ಯತ್ನಿಸಲಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ಎಂದಿನಂತೆ ಮೊದಲು ಬ್ಯಾಟಿಂಗ್ ಮಾಡಲಿದೆ.
ಟಾಸ್ ಬಳಿಕ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಟೀಂ ಇಂಡಿಯಾದಲ್ಲಿ 1 ಬದಲಾವಣೆ ಮಾಡಲಾಗಿದೆ. ಸ್ಟಾರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರನ್ನು ಈ ಪಂದ್ಯದಿಂದ ಹೊರಗಿಡಲಾಗಿದೆ. ಅವರ ಬದಲಿಗೆ ಬೌಲರ್ ಅರ್ಷದೀಪ್ ಸಿಂಗ್ಗೆ ಆಡುವ ಅವಕಾಶ ನೀಡಲಾಗಿದೆ. ಇತ್ತ ನ್ಯೂಜಿಲೆಂಡ್ ತಂಡದಲ್ಲೂ 1 ಬದಲಾವಣೆ ಮಾಡಲಾಗಿದೆ.
ಉಭಯ ತಂಡಗಳು
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಕಾರಿ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ.
ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.



