ಭಾರತ-ನ್ಯೂಜಿಲ್ಯಾಂಡ್ ಟೆಸ್ಟ್ ಮ್ಯಾಚ್: ಮೊದಲ ದಿನ ವರುಣನಿಗೆ ಮೀಸಲು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ-ನ್ಯೂಜಿಲ್ಯಾಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ದಿಯಾಗಿದ್ದು, ಮೊದಲ ದಿನದ ಆಟ ರದ್ದಾಗಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರತ-ನ್ಯೂಜಿಲ್ಯಾಂಡ್ ನಡುವೆ ಟೆಸ್ಟ್ ಪಂದ್ಯ ಆರಂಭವಾಗಬೇಕಿತ್ತು. ಆದರೆ ಮೊದಲ ದಿನದ ಆಟವೇ ರದ್ದಾಗಿದೆ.ಇದರಿಂದಾಗಿ ಸ್ಟೇಡಿಯಂ ಗೆ ಬಂದಿದ್ದ ಕ್ರಿಕೆಟ್ ಅಭಿಮಾನಿಗಳು ನಿರಾಶರಾಗಿ ವಾಪಾಸ್ ತೆರಳಿದ್ದಾರೆ.

ಬೆಂಗಳೂರಿನಲ್ಲಿ ಬಿಟ್ಟು ಬಿಡದೇ ಮಳೆಯಾಗುತ್ತಿದ್ದು, ಬೆಳಿಗ್ಗೆ 9:30ಕ್ಕೆ ಆರಂಭವಾಗಬೇಕಿದ್ದ ಪಂದ್ಯಕ್ಕೆ ಮಳೆರಾಯ ತಡೆ ನೀಡಿದ್ದಾನೆ. ಲಂಚ್ ಬ್ರೇಕ್ ಮುಗಿದರೂ ಮಳೆ ನಿಂತಿಲ್ಲ. ಇದರಿಂದಾಗಿ ಭಾರತ-ನ್ಯೂಜಿಲ್ಯಾಂಡ್ ನಡುವಿನ ಮೊದಲ ದಿನದ ಆಟ ರದ್ದು ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!