Monday, November 28, 2022

Latest Posts

ದೇಶದಲ್ಲಿ ಮತ್ತೆ ಹೆಚ್ಚಿದ ಕೊರೋನಾ: ಒಂದೇ ದಿನ 3000ಕ್ಕೂ ಹೆಚ್ಚು ಪ್ರಕರಣ, 13 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,805 ಹೊಸ ಕರೋನಾ ವೈರಸ್ ಪ್ರಕರಣಗಳು ದಾಖಲಾಗಿವೆ. ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿಯ ನೀಡಿದೆ.
ಇದರಿಂದಾಗಿ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 5,28,655 ಆಗಿದೆ. 4,40,24,164 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 38,293 ಒಟ್ಟು ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಹೇಳಿವೆ.
ಕರ್ನಾಟಕದಲ್ಲಿ 2,821, ಕೇರಳದಲ್ಲಿ 10,605, ತಮಿಳುನಾಡಿನಲ್ಲಿ 5,496, ಮಹಾರಾಷ್ಟ್ರದಲ್ಲಿ 3,192, ಪಶ್ಚಿಮ ಬಂಗಾಳದಲ್ಲಿ 3,169 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!