ಹೊಸದಿಗಂತ ಡಿಜಿಟಲ್ ಡೆಸ್ಕ್
ಕೆನಡಾ ಮೂಲದ ದರೋಡೆಕೋರ ಲಖ್ಬೀರ್ ಸಿಂಗ್ ಅಲಿಯಾಸ್ ಲಾಂಡಾ ನಡೆಸುತ್ತಿದ್ದ ಶಸ್ತ್ರಾಸ್ತ್ರ ಕಳ್ಳಸಾಗಣೆ ದಂಧೆಯ ಮೇಲೆ ಸಮರ ಸಾರಿರುವ ಪಂಜಾಬ್- ದೆಹಲಿ ಪೊಲೀಸರು ವಿಶೇಷ ದಳದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ದಾಳಿ ವೇಳೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಮತ್ತು ಅವರ ಬಳಿಯಿಂದ ಒಂದು ಎಕೆ -47 ಹಾಗೂ ಮೂರು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪಂಜಾಬ್ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ. ಅಮೃತಸರ ಪೋಲೀಸ್ ಮತ್ತು ಪಂಜಾಬ್ ಪೋಲೀಸ್ ನ ದರೋಡೆಕೋರ ನಿಗ್ರಹ ಕಾರ್ಯಪಡೆಯು ದೆಹಲಿ ಪೊಲೀಸ್ ವಿಶೇಷ ಕೋಶದೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ ಈ ಗ್ಯಾಂಗ್ ವಿರುದ್ಧ ಕಾರ್ಯಾಚರಣೆ ನಡೆಸಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ