ಖಲೀಸ್ತಾನ್‌ ವಿರೋಧಿ ಮೆರವಣಿಗೆ ವೇಳೆ ಘರ್ಷಣೆಗೆ ಪಟಿಯಾಲ ಉದ್ವಿಗ್ನ; ಇಂಟರ್ನೆಟ್‌ ಬಂದ್‌, ಪೊಲೀಸರ ವರ್ಗಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಖಲಿಸ್ತಾನ್ ವಿರೋಧಿ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಗಳು ನಾಲ್ವರು ಗಾಯಗೊಂಡ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಪಂಜಾಬ್‌ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ.
ಖಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದಂತೆ ಶುಕ್ರವಾರ ಪಟಿಯಾಲದ ಕಾಳಿ ದೇವಸ್ಥಾನದ ಹೊರಗೆ ಎರಡು ಗುಂಪುಗಳು ಘರ್ಷಣೆ ಮತ್ತು ಪರಸ್ಪರ ಕಲ್ಲು ತೂರಾಟ ನಡೆದಿದ್ದರಿಂದ ನಾಲ್ವರು ಗಾಯಗೊಂಡಿದ್ದರು. ಮೆರವಣಿಗೆ ನಡೆಸುತ್ತಿದ್ದ ಬಲಪಂಥೀಯ ಗುಂಪು ಮತ್ತು ಸಿಖ್‌ ಮೂಲಭೂತವಾದಿಗಳ ನಡುವೆ ಈ ಸಂಘರ್ಷ ಸಂಭವಿಸಿತ್ತು.
ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು. ಪ್ರಕರಣ ನಡೆದ ಪಂಜಾಬ್‌ ಬ ಪಟೀಯಾಲ ಉದ್ವಿಗ್ನಗೊಂಡಿದ್ದು, ಶನಿವಾರ ಮೊಬೈಲ್‌ ಇಂಟರ್ನೆಟ್‌ ಸೇವೆಗಳನ್ನು ಜಿಲ್ಲೆಯಲ್ಲಿ ಸ್ಥಗಿತಗೊಳಿಸಲಾಗಿದೆ. ಜೊತೆಗೆ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿರ್ದೇಶನದ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಪಟಿಯಾಲ ರೇಂಜ್), ಪಟಿಯಾಲಾ ಹಿರಿಯ ಪೊಲೀಸ್ ಅಧೀಕ್ಷಕ ಮತ್ತು ಪೊಲೀಸ್ ಅಧೀಕ್ಷಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ.
ಮುಖ್ವಿಂದರ್ ಸಿಂಗ್ ಚಿನ್ನಾ ಅವರನ್ನುಪಟಿಯಾಲ ವಲಯದ ಹೊಸ ಐಜಿಯನ್ನಾಗಿ ನೇಮಿಸಲಾಗಿದೆ. ದೀಪಕ್ ಪಾರಿಕ್ ಅವರು ಪಟಿಯಾಲದ ಹೊಸ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ವಕ್ತಾರರು ತಿಳಿಸಿದ್ದಾರೆ. ವಜೀರ್ ಸಿಂಗ್ ಅವರನ್ನು ಪಟಿಯಾಲದ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!