Saturday, July 2, 2022

Latest Posts

ಆಫ್ರಿಕಾ ಪ್ರವಾಸದಲ್ಲಿ ಭಾರತ: ಪಂದ್ಯಗಳಿಗೆ ಪ್ರೇಕ್ಷಕರಿಗಿಲ್ಲ ಅವಕಾಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಈಗಾಗಲೇ ಪಂದ್ಯಕ್ಕೆ ಸಕಲ ಸಿದ್ಧತೆ ನಡೆಸುತ್ತಿದ್ದು, ಇತ್ತ ಪಂದ್ಯಕ್ಕೆ ಕೊರೋನಾ ಹೊಸ ರೂಪಾಂತರದ ಕರಿನೆರಳು ಬಿದ್ದಿದೆ.
ಆಫ್ರಿಕಾದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಇದೀಗ ಅಲ್ಲಿನ ಆಡಳಿತ ಮಂಡಳಿ ಎಲ್ಲಾ ಪಂದ್ಯಗಳು ಖಾಲಿ ಕ್ರೀಡಾಂಗಣಗಳಲ್ಲಿ ನಡೆಸಲು ತೀರ್ಮಾನಿಸಿದೆ.
ಆಟಗಾರರು ಎಲ್ಲಾ ರೀತಿಯಲ್ಲೂ ಸುರಕ್ಷಿತವಾಗಿರಲು ದಕ್ಷಿಣ ಆಫ್ರಿಕಾ ಕ್ರಿಕೆಟ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ದಕ್ಷಿಣ ಆಫ್ರಿಕಾದಲ್ಲಿ ಓಮಿಕ್ರಾನ್ ಪ್ರಕರಣಗಳಲ್ಲಿ ತ್ವರಿತ ಹೆಚ್ಚಳದಿಂದಾಗಿ ಕ್ರಿಕೆಟ್ ದಕ್ಷಿಣ ಆಫ್ರಿಕಾ (CSA) ಪಂದ್ಯಗಳ ಸಮಯದಲ್ಲಿ ಪ್ರೇಕ್ಷಕರಿಗೆ ಮೈದಾನಕ್ಕೆ ಪ್ರವೇಶಿಸಲು ಅನುಮತಿ ನೀಡಲು ನಿರಾಕರಿಸಿದೆ.
ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸಿ ಆಫ್ರಿಕನ್ ಸರ್ಕಾರವು ಇತ್ತೀಚೆಗೆ 2000 ಜನರಿಗೆ ಕ್ರೀಡಾಂಗಣಕ್ಕೆ ಬರಲು ಅವಕಾಶ ನೀಡಿತ್ತು. ಆದರೆ ಈಗ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಮಂಡಳಿ ಈ ನಿರ್ಧಾರ ಕೈಗೊಳ್ಳುತ್ತಿದೆ.
ಭಾರತ ತಂಡ ಮೂರು ಟೆಸ್ಟ್ ಪಂದ್ಯಗಳು ಮತ್ತು ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಬೇಕಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss