ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಪದಕದ ಖಾತೆ ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಫೈನಲ್‌ನಲ್ಲಿ 22 ವರ್ಷದ ಮನು ಭಾಕರ್ ಕಂಚಿನ ಪದಕ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
10 ಮೀಟರ್ ಮಹಿಳಾ ಏರ್ ಪಿಸ್ತೂಲ್ ಫೈನಲ್ ಪಂದ್ಯದಲ್ಲಿ 221.7 ಅಂಕ ಗಳಿಸಿ ಕಂಚಿನ ಪದಕ ಪದಕಕ್ಕೆ ಕೊರಳೊಡ್ಡಿದ್ದಾರೆ.
ಒಲಿಂಪಿಕ್ಸ್ ಇತಿಹಾಸದಲ್ಲೇ ಪದಕ ಜಯಿಸಿದ ಮೊದಲ ಮಹಿಳಾ ಶೂಟರ್ ಎನ್ನುವ ಹಿರಿಮೆಗೆ ಮನು ಭಾಕರ್ ಪಾತ್ರರಾಗಿದ್ದಾರೆ.
ಶನಿವಾರ ನಡೆದ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ ಹರ್ಯಾಣದ ಝಜ್ಜರ್ ಜಿಲ್ಲೆಯ ಯುವ ಶೂಟರ್ 580 ಅಂಕಗಳನ್ನು ಗಳಿಸುವ ಮೂಲಕ ಮೂರನೇ ಸ್ಥಾನಿಯಾಗಿ ಫೈನಲ್ ಪ್ರವೇಶಿಸಿದ್ದರು. ಈ ಮೂಲಕ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಶೂಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದರು.