ಏಷ್ಯಾಕಪ್ ಟೂರ್ನಿಗಾಗಿ ಪಾಕ್ ನತ್ತ ಭಾರತ?: ಬಿಸಿಸಿಐ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮತ್ತೆ ಮುಖಾಮುಖಿಯಾಗುತ್ತಿದ್ದು, ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ.

ಇದರ ಬೆನ್ನಲ್ಲೇ ಭಾರತ ತಂಡ 2023ರ ಏಷ್ಯಾಕಪ್ ಟೂರ್ನಿಗಾಗಿ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ ಅನ್ನೋ ಮಾತುಗಳು ಭಾರಿ ಸದ್ದು ಮಾಡಿದೆ. ಈ ಹೇಳಿಕೆ ಬಹಿರಂಗವಾಗುತ್ತಿದ್ದಂತೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಖುಷಿಪಟ್ಟಿದೆ.

ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, 2023ರಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳುತ್ತಿಲ್ಲ. ಭಾರತ ತಂಡದ ಪಾಕ್ ಪ್ರವಾಸವನ್ನು ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಸದ್ಯ ಮಟ್ಟಿಗೆ ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2023ರ ಏಷ್ಯಾಕಪ್ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಲಾಗುತ್ತದೆ. ಹೀಗಾಗಿ ಭಾರತ ತಂಡ ಪಾಕಿಸ್ತಾನ ಪ್ರವಾಸ ಪ್ರಶ್ನೆ ಉದ್ಭವಿಸುವುದಿಲ್ಲ. ಭಾರತ ತಂಡ ಪಾಕಿಸ್ತಾನ ಪ್ರವಾಸ ಸುಲಭದ ವಿಚಾರವಲ್ಲ, ಇದನ್ನು ಬಿಸಿಸಿಐ ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ. ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹಳಸಿದೆ. ಈ ಸಂಬಂಧ ಉತ್ತಮವಾಗಬೇಕು. ರಾಜಕೀಯ ಸಂಬಂಧಗಳು ಗಟ್ಟಿಯಾಗಬೇಕು. ಹೀಗಾದಲ್ಲಿ ಮಾತ್ರ ಪ್ರವಾಸ ಸಾಧ್ಯ. ಇದನ್ನು ಕೇಂದ್ರ ಸರ್ಕಾರ ನಿರ್ಧರಿಸಲಿದೆ ಎಂದು ಜಯ್ ಶಾ ಹೇಳಿದ್ದಾರೆ.

2013ರ ಬಳಿಕ ಭಾರತ ಹಾಗೂ ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಉಭಯ ರಾಷ್ಟ್ರಗಳು, ವಿಶ್ವಕಪ್, ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ, ಏಷ್ಯಾಕಪ್ ಟೂರ್ನಿಗಳಲ್ಲಿ ಮುಖಾಮುಖಿಯಾಗಿದೆ. ಆದರೆ ದ್ವಿಪಕ್ಷೀಯ ಟೂರ್ನಿ ನಡೆದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!