ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಇದ್ದ ಸಂಘರ್ಷಕ್ಕೆ ಕದನ ವಿರಾಮ ಘೋಷಿಲಾಗಿದೆ. ಆದ್ರೆ ಕದನ ವಿರಾಮದ ಬಗ್ಗೆ ಭಾರತ ಮತ್ತು ಪಾಕ್ ಒಪ್ಪಂದಕ್ಕೆ ಬಂದಿವೆ, ಭಯೋತ್ಪಾದನೆ ವಿರುದ್ಧದ ನಮ್ಮ ಹೋರಾಟ ದೃಢವಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಟ್ವೀಟ್ ಮಾಡಿ ಹೇಳಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ಸಂಧಾನವಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದರು.
ಇನ್ನು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12:00 ಗಂಟೆಗೆ ಮತ್ತೆ ಮಾತನಾಡಲಿದ್ದಾರೆ ಎಂದು ದೇಶಾಂಗ ಕಾರ್ಯದರ್ಶಿ ಮಿಶ್ರಿ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMO) ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ DGMO ಅವರಿಗೆ ಕರೆ ಮಾಡಿದರು. ಭಾರತೀಯ ಸಮಯ 1700 ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ, ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು. ಇಂದು, ಈ ತಿಳುವಳಿಕೆಯನ್ನು ಜಾರಿಗೆ ತರಲು ಎರಡೂ ಕಡೆಯಿಂದ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ