ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಪ್ರಧಾನಿ ಮೋದಿ ಅವರು ವಾಯುಪಡೆ ಮುಖ್ಯಸ್ಥ ಮಾರ್ಷಲ್ ಎಪಿ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಪ್ರಧಾನ ಮಂತ್ರಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ನಡುವಿನ ಪ್ರತ್ಯೇಕ ಸಭೆಯ ನಂತರ ವಾಯುಪಡೆಯ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ.
ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಸೇನಾ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸಭೆಯಲ್ಲಿ ಮೋದಿ ತಿಳಿಸಿದ್ದಾರೆ.